ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ.

43

ಭೀಕರ ರಸ್ತೆ ಅಪಘಾತದಲ್ಲಿ ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ ಹೊಂದಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿ ಮೂಲಕ ಅವರು ಗಮನ ಸೆಳೆದಿದ್ದರು. ಅವರಿಗೆ ಕೇವಲ 23 ವರ್ಷ ಆಗಿತ್ತು. ಬಾಳಿ ಬದುಕಬೇಕಿದ್ದ ಅವರು ಸಣ್ಣ ವಯಸ್ಸಿನಲ್ಲೇ ಕೊನೆಯುಸಿರು ಎಳೆದಿದ್ದಾರೆ. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಾ ಇದ್ದಾರೆ. ಮುಂಬೈನ ಹಿಲ್ ಪಾರ್ಕ್ ರಸ್ತೆಯಲ್ಲಿ ನಿನ್ನೆ ಮಧ್ಯಾಹ್ನ 3.15ಕ್ಕೆ ತಮ್ಮ ಬೈಕ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ಅವರ ಬೈಕ್‍ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಆಗಲೇ ಅವರು ಸಾವನ್ನಪ್ಪಿದರು. ಟ್ರಕ್ ಹಾಗೂ ಅದರ ಚಾಲಕ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ಅಂಬೋಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಮನ್ ಜೈಸ್ವಾಲ್ ಅವರು ಆಡಿಷನ್ ಒಂದಕ್ಕೆ ತೆರಳುತ್ತಿದ್ದರು. ಆದರೆ, ವಿಧಿ ಬರಹ ಬೇರೆಯದೇ ಇತ್ತು. ಇದು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಸಾಕಷ್ಟು ದುಃಖ ನೀಡಿದೆ. ಧಾರಾವಾಹಿಗೆ ಬರುವುದಕ್ಕೂ ಮೊದಲು ಅವರು ಮಾಡೆಲ್ ಆಗಿ ಗಮನ ಸೆಳೆದಿದ್ದರು.