ಭೀಕರ ರಸ್ತೆ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು…

61
firstsuddi

ಹಾವೇರಿ: ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ ನಡೆದಿದೆ.

ಮಾಲತೇಶ ಕುಂದ್ರಳ್ಳಿ (21), ಮಾಲತೇಶ (24) ಮೃತ ದುರ್ದೈವಿಗಳು. ಘಟನೆಯಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್, ನಾಗರಾಜ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.