ದಾವಣಗೆರೆ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.
ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವೇಗವಾಗಿ ಬಂದ ಇಂಡಿಕಾ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಆರು ಜನ ಅಸುನೀಗಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಮೃತರನ್ನು ಮಲ್ಲಂಗೋವ(22), ಸಂತೋಷ್(21), ಸಂಜೀವ್(20), ಜೈಭೀಮ್(18), ರಾಘು(23), ಸಿದ್ದೇಶ್(20), ವೇದಮೂರ್ತಿ(18) ಎಂದು ಗುರುತಿಸಲಾಗಿದೆ.ಕಾರಿನ ಚಾಲಕ ಮದ್ಯ ಸೇವಿಸಿ ನಿದ್ದೆಗೆ ಜಾರಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಎಸ್ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.
ಇಂಡಿಕಾ ಕಾರು ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಮಾಹಿತಿ ತಿಳಿದು ಘಟನಾಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










