ಸುರತ್ಕಲ್: ಭೀಕರ ರಸ್ತೆ ಅಪಘಾತ ಸಂಭವಿಸಿ ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜು ಗುಜ್ಜಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕಾರು ಚಾಲಕ ಅರ್ಜುನ್ ಎಂದು ಗುರುತಿಸಲಾಗಿದೆ. ಸಹ ಪ್ರಯಾಣಿಕರಾದ ಮಹಮ್ಮದ್ ಫೈಝಾನ್ ಮತ್ತು ಅನಿರುದ್ದ ನಾಯರ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಅತೀ ವೇಗದ ಚಾಲನೆಯಿಂದಾಗಿ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಶವವನ್ನು ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಂಗಳೂರು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










