ಬೆಳಗಾವಿ: ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕಾಕ್ ನಗರದ 6 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಸುನೀಲ್ ಶೇಡಶ್ಯಾಳೆ, ಬಸವರಾಜ್ ಕುರ್ತಿ, ಬಾಲಚಂದ್ರ ಗೌಡರ, ಬಸವರಾಜ್ ದೊಡಮಾಳ್, ವಿರೂಪಾಕ್ಷ ಗುಮತಿ, ಈರಣ್ಣ ಶೇಬಿನಕಟ್ಟಿ ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
2 ದಿನಗಳ ಹಿಂದೆ ಗೋಕಾಕ್‍ನಿಂದ ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗ್‍ರಾಜ್‍ನ ಕುಂಭಮೇಳಕ್ಕೆ ತೆರಳುತ್ತಿದ್ದರು ಇಂದು ಬೆಳಗಿನ ಜಾವ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್‍ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.
ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಮುಕ್ತಾಯಗೊಳ್ಳಲು ಇನ್ನೆರಡು ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ಪುಣ್ಯಸ್ನಾನಕ್ಕೆ ತೆರಳುತ್ತಿದ್ದರು.










