ಭೀಕರ ರಸ್ತೆ ಅಪಘಾತ ಬಿಎಂಟಿಸಿ ಬಸ್-ಬೈಕ್ ಮುಖಾಮುಖಿ : ಸವಾರ ಸಾವು.

26

ಬೆಂಗಳೂರು: ದೇಶದಾದ್ಯಂತ ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ಅಪಘಾತಗಳು ನಡೆಯುತ್ತಲೆ ಇವೆ. ಆದರೂ ಸವಾರರು ಸುರಕ್ಷಿತವಾಗಿ ವಾಹನ ಚಲಾಯಿಸುತ್ತಿಲ್ಲ. ಮತ್ತೊಂದು ವಾಹನವನ್ನು ಓವರ್‌ಟೇಕ್  ಮಾಡುವ ಭರದಲ್ಲಿ ಎದುರಿಗೆ ಬಂದ ಬಿಎಂಟಿಸಿ ಬಸ್ ಗೆ ಸಿಲುಕಿ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ವಿಷ್ಣುವರ್ಧನ್ ರಸ್ತೆಯ ಬಿಜಿಎಸ್ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಆನಂದ್ ಎಂದು ಗುರುತಿಸಲಾಗಿದೆ. ಆನಂದ್ ಮತ್ತೊಂದು ವಾಹನವನ್ನು ಓವರ್‌ಟೇಕ್  ಮಾಡುವಾಗ ಎದುರಿಗೆ ಬಂದ ಬಿಎಂಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ನಡುವೆ ಮೃತರ ಕುಟುಂಬಕ್ಕೆ ಮಧ್ಯಂತರ ಪರಿಹಾರ ನೀಡಿರುವುದಾಗಿ ಬಿಎಂಟಿಸಿ ಪ್ರಕಟಣೆ ತಿಳಿಸಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.