ಭೀಕರ ರಸ್ತೆ ಅಪಘಾತ – ಮೂವರು ಸ್ಥಳದಲ್ಲೇ ಸಾವು…

74
firstsuddi

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೆಜ್ಜನಗೆರೆ ಬಳಿ ನಡೆದಿದೆ.

ಮೃತರನ್ನು ನೀರಜ್ ಕುಮಾರ್, ಅವರ ಪತ್ನಿ ಸೆಲ್ವಿ ಮತ್ತು ಕಾರು ಚಾಲಕ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೋರ್ವ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.