ಮುಂಬೈ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ, ಮುಂಬೈನ ಆರ್ಥರ್ ರೋಡ್ ಜೈಲಿನಿಂದ ವಶಕ್ಕೆ ಪಡೆದುಕೊಂಡಿದೆ.
ಎನ್ ಸಿಪಿಯ ಹಿರಿಯ ನಾಯಕರ ಮನವಿಯನ್ನು ನ್ಯಾಯಮೂರ್ತಿ ರೇವತಿ ಮೋಹಿತೆ ಡೇರೆ ಅವರ ಏಕ ಪೀಠದ ಮುಂದೆ ಇಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ.
ತಮ್ಮ ವಿರುದ್ಧದ ಭ್ರಷ್ಟಾಚಾರದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ತನ್ನನ್ನು ಕಸ್ಟಡಿಗೆ ತೆಗೆದುಕೊಳ್ಳಲು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೇಶಮುಖ್ ಈ ಹಿಂದೆ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು.










