ಮಂಗಳೂರಿನಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 1 ಕೋಟಿ ಹಣ ವಶ…

150
firstsuddi

ಮಂಗಳೂರು: ದಾಖಲೆ ರಹಿತವಾಗಿ ಒಂದು ಕೋಟಿ ರೂಪಾಯಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಇಂದು ಬೆಳಗ್ಗೆ ವಶಕ್ಕೆ ಪಡೆದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಮಲ್ಲೇಶ್ವರಂ ನಿವಾಸಿ ಮಂಜುನಾಥ (56) ಎಂದು ಗುರುತಿಸಲಾಗಿದೆ.ನಗರದ ಬಂದರು ಪೊಲೀಸರು ಶುಕ್ರವಾರ ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ಅನುಮಾನದ ಮೇಲೆ ತಪಾಸಣೆ ನಡೆಸಿದಾಗ ದಾಖಲೆ ರಹಿತ ಹಣ ಪತ್ತೆಯಾಗಿದೆ.ಮಂಜುನಾಥನ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣ ಎಲ್ಲಿಂದ ಮತ್ತು ಯಾರಿಗೆ ತಲುಪಿಸಲು ಸಾಗಾಟ ಮಾಡಲಾಗುತ್ತಿತ್ತು ಎನ್ನುವುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.