ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಬಿಜೆಪಿಯವರೇ ಕುಮ್ಮಕ್ಕು ನೀಡಿದ್ದಾರೆ : ಯು.ಟಿ. ಖಾದರ್.

214
firstsuddi

ಬೆಂಗಳೂರು : ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಬಿಜೆಪಿಯವರೇ ಕುಮ್ಮಕ್ಕು ನೀಡಿದ್ದಾರೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಅವರು ಹೇಳಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಂಡಲ್ಲಿ ಗುಂಡಿಕ್ಕಿ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ಹೇಳಿದ್ದಾರೆ. ಅವರ ಮೇಲೆ ಯಾಕೆ ಎಫ್‍ಐಆರ್ ದಾಖಲಾಗಿಲ್ಲ. ನನ್ನ ಮೇಲೆ ಮಾತ್ರ ಎಫ್‍ಐಆರ್ ಹಾಕಿದ್ದೇಕೆ? ಗೋಲಿಬಾರ್‍ನಲ್ಲಿ 2 ಜೀವವನ್ನು ತೆಗೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಆಗಬೇಕು. ಸಿಐಡಿ, ಮ್ಯಾಜಿಸ್ಟ್ರೇಟರ್ ತನಿಖೆ ಯಾಕೆ? ಎಂದು ಪ್ರಶ್ನಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರಕ್ಕೆ ಕಪ್ಪು ಚುಕ್ಕೆ ತರಲು ಬಿಜೆಪಿಯಲ್ಲಿನ ಕೆಲವರು ಗಲಭೆಗೆ ಕುಮ್ಮಕ್ಕು ನೀಡಿದ್ದಾರೆ. ಇದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗಮನಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಪೌರತ್ವ ತಿದ್ದುಪಡಿ ವಿರೋಧಿಸಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲೇ ಪ್ರತಿಭಟನೆ ಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಎಲ್ಲಾ ಹಿಂಸಾಚಾರಗಳನ್ನು ಕಾಂಗ್ರೆಸ್ ಮೇಲೆ ಹೊರಿಸುವುದು ಸರಿಯಲ್ಲ ಎಂದು ಆಕ್ರೋ ವ್ಯಕ್ತಪಡಿಸಿದರು.