ಮಂಗಳೂರು: ಪ್ರಸಿದ್ಧ ಕಬಡ್ಡಿ ಆಟಗಾರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುನಲ್ಲಿ ನಡೆದಿದೆ.
ಪುದುವೆಟ್ಟು ನಿವಾಸಿ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಉಜಿರೆಯ ಸಾನಿಧ್ಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸ್ವರಾಜ್, ಕಬಡ್ಡಿ ಕ್ರೀಡೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದ.
ಇಂದು ತನ್ನ ಮನೆಯ ಸ್ನಾನದ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಸ್ವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










