ಮಂಗಳೂರು : ಮಹಿಳೆಯೊಬ್ಬರು ಅಪಾರ್ಟ್‍ಮೆಂಟ್ ನ 14ನೇ ಅಂತಸ್ತಿರುವ ಮನೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ(64) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಅಪಾರ್ಟ್ ಮೆಂಟ್ ಬಾಲ್ಕನಿಯ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 10 ವರ್ಷದಿಂದ ಇದೇ ಅಪಾರ್ಟ್ಮೆಂಟ್ ನಲ್ಲಿ ಇವರು ವಾಸ ಮಾಡಿಕೊಂಡಿದ್ದರು. ಮಾನಸಿಕ ಒತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಪುಷ್ಪಲತಾ ನಾಯಕ್ ಹಿಂದೊಮ್ಮೆ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










