ಮಂಗಳೂರು : ಅಮಿತ್ ಶಾ ಅವರು ಮಂಗಳೂರಿಗೆ ಆಗಮಿಸಿದರೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ : ಐವನ್ ಡಿಸೋಜ.

188
firstsuddi

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ತಿದ್ದುಪಡಿಗೆ ಕಾರಣರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳೂರಿಗೆ ಆಗಮಿಸಿದರೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಹೇಳಿದ್ದಾರೆ. ಜ.19ರಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶಕ್ಕೆ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಹಿಂಸಾಚಾರ, ಗೋಲೀಬಾರ್ ಬಳಿಕ ಈಗಾ ಸ್ವಲ್ಪ ಸಹಸ ಸ್ಥಿತಿಯತ್ತ ಮರಳುತ್ತಿದೆ. ಈ ನಡುವೆ ಅಮಿತ್ ಶಾ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ ಎಂಬ ಮಾಹಿತಿ ಇದೆ. ಈಗಿನ ಪರಿಸ್ಥಿತಿಯಲ್ಲಿ ಅಮಿತ್ ಶಾ ಅವರು ಆಗಮಿಸಿದರೆ ಶಾಂತಿ ಕದಡಬಹುದು. ಹೀಗಾಗಿ ಅಮಿತ್ ಶಾ ಅವರ ಭೇಟಿಗೆ ಮಂಗಳುರು ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾಡಳಿತ ಅವಕಾಸ ಕಲ್ಪಿಸಬಾರದು ಎಂದು ಆಗ್ರಹಿಸಿದರು. ಇದನ್ನು ಮೀರಿ ಅಮಿತ್ ಶಾ ಅವರ ಭೇಟಿಗೆ ಅವಕಾಶ ಕಲ್ಪಿಸಿದರೆ ಕಾಂಗ್ರೆಸ್ ಮಂಗಳೂರಿನಲ್ಲಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಈ ಸಮಯದಲ್ಲಿ ಅಮಿತ್ ಶಾ ಅವರು ಮಂಗಳೂರಿಗೆ ಅಶಾಂತಿ ವಾತಾವರಣ ನಿರ್ಮಾಣವಾಗುತ್ತದೆ ಎಂದರು.