ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ- ಚಿನ್ನದಂಗಡಿ ಮಾಲೀಕರಿಗೆ ಬಿಗ್ ಶಾಕ್…

51
firstsuddi

ಮಂಗಳೂರು/ಉಡುಪಿ: ಬೆಳ್ಳಂಬೆಳಗ್ಗೆ ಇಲ್ಲಿನ ವಿವಿಧ ಚಿನ್ನದಂಗಡಿ ಮೇಲೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ನ ಆಭರಣ ಮಳಿಗೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಐದಾರು ಮಂದಿ ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನ ಖರೀದಿಯ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

ಇದೇ ವೇಳೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಹೆಬ್ರಿ ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.