ಮಂಗಳೂರು : ನಗರದ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ..
ಮೃತ ವ್ಯಕ್ತಿಯನ್ನು ಬಿಎಸ್ಎನ್ಎಲ್ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಸುಮಾರು 9.53ಕ್ಕೆ ಈ ಘಟನೆ ಸಂಭವಿಸಿದ್ದು, ಪಾನಮತ್ತನಾಗಿ ಕಾರು ಚಲಾಯಿಸಿದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಷಣ್ಮುಗಂ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆನಂದ ಎಂಬವರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಅವರು ಸಾಕಷ್ಟು ದೂರ ಎಗರಿ ಬಿದ್ದು ಸಾವನ್ನಪ್ಪಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಆರೋಪಿ ಷಣ್ಮುಗಂ ವಿರುದ್ದ ಕದ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.










