ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಎನ್ಐಎಗೆ ಹಸ್ತಾಂತರ…

57
firstsuddi

ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಅಧಿಕೃತವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ. ಇಂದಿನಿಂದಲೇ ಎನ್ಐಎ ಅಧಿಕಾರಿಗಳು ತನಿಖೆಯನ್ನು ಆರಂಭಿಸಲಿದ್ದಾರೆ.

ನವೆಂಬರ್ 19ರಂದು ಮಂಗಳೂರಿನ ಗರೋಡಿಯಲ್ಲಿ ಶಂಕಿತ ಉಗ್ರ ಶಾರೀಕ್ ಆಟೋದಲ್ಲಿ ಕುಕ್ಕರ್ ಬಾಂಬ್ ಕೊಂಡೊಯ್ಯುತ್ತಿದ್ದಾಗ ಸ್ಫೋಟಗೊಂಡಿತ್ತು. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲದ ಮೂಲಕ ಮಂಗಳೂರು ಪೊಲೀಸರಿಂದ ಎನ್‍ಐಎ ಪಡೆದುಕೊಂಡಿದೆ. ಇದೀಗ ಎನ್‍ಐಎ ಅಧಿಕಾರಿಗಳಿಗೆ ಪ್ರಕರಣದ ವಿಚಾರಣೆಯನ್ನು ನಗರ ಪೊಲೀಸ್ ಆಯುಕ್ತರು ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ.

ಈಗಾಗಲೇ ಪೊಲೀಸರು ಶಾರೀಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಖುದ್ದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ತನಿಖಾಧಿಕಾರಿ ಪಿ.ಎ.ಹೆಗ್ಡೆ ನೇತೃತ್ವದಲ್ಲೇ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಎನ್‍ಐಎ ಅಧಿಕಾರಿಗಳು ಇಂದಿನಿಂದ ಪ್ರತ್ಯೇಕ ಹೇಳಿಕೆ ಪಡೆಯಲಿದ್ದಾರೆ.