ಮಂಗಳೂರು : ಕೌಟಂಬಿಕ ಕಲಹ-ವ್ಯಕ್ತಿಯಿಂದ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ…

126
firstsuddi

ಮಂಗಳೂರು: ಕೌಟಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೋರ್ವ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ನೆಲ್ಯಾಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಕೊಣಾಲು ಗ್ರಾಮದ ನಿವಾಸಿ ಶ್ರೀಮತಿ ಶೈನಿ (32) ಹಾಗೂ ಅವರ ಗಂಡ ಬಿಜು ಥೋಮಸ್ ಇಬ್ಬರ ನಡುವೆ ಜಗಳವಾಗಿದ್ದು, ಇಂದು ಶೈನಿ ರವರು ಅವರ ಸಂಬಂಧಿ ಝಾನ್ಸಿ ಎಂಬವರ ಜೊತೆ ನೆಲ್ಯಾಡಿ ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡಲು ಹೋಗುತ್ತಿದ್ದಾಗ ಆರೋಪಿ ಬಿಜು ಥೋಮಸ್ ಎಂಬಾತನು ಇಬ್ಬರಿಗೂ ಆಸಿಡ್ ಎರಚಿದ್ದು, ಗಾಯಗೊಂಡ ಶೈನಿ ಮತ್ತು ಝಾನ್ಸಿರವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರು ನೊಂದ ಮಹಿಳೆಯರನ್ನು ವಿಚಾರಿಸಿ ಹೇಳಿಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.