ಮಂಗಳೂರು ದಸರಾ : ಶಾಲೆಗಳಿಗೆ 4 ದಿನ ಹೆಚ್ಚುವರಿ ರಜೆ ಘೋಷಣೆ…

58
firstsuddi

ಮಂಗಳೂರು : ದಸರಾ ಹಬ್ಬ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ 4 ದಿನಗಳ ಹೆಚ್ಚುವರಿ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೆ.28ರಿಂದ ಅಕ್ಟೋಬರ್ 1ರವರೆಗೆ ಹೆಚ್ಚುವರಿ ರಜೆಗಳನ್ನು ಘೋಷಿಸಿದ್ದಾರೆ. ಅಕ್ಟೋಬರ್ 2ರ ಭಾನುವಾರ ಕಡ್ಡಾಯವಾಗಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸುವಂತೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳಿಗೆ ನೀಡಲಾಗಿರುವ ಈ ನಾಲ್ಕು ಹೆಚ್ಚುವರಿ ರಜೆಗಳನ್ನು ನವೆಂಬರ್ ತಿಂಗಳಿನ ನಾಲ್ಕು ಶನಿವಾರ ಪೂರ್ಣ ದಿನದ ತರಗತಿ ಮತ್ತು ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ರಜೆಯನ್ನು ಸರಿದೂಗಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ದಸರಾ ನಡೆಯಲಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾಕ್ಕಾಗಿ ಎಲ್ಲಾ ರೀತಿಯ ಸಕಲ ಸಿದ್ಧತೆಗಳು ನಡೆದಿದೆ. ಒಂಬತ್ತು ದಿನಗಳ ಕಾಲ ನವದುರ್ಗೆಯರ ಆರಾಧನೆ ಹಾಗೂ ದಸರಾಕ್ಕೆ ಸೆಪ್ಟೆಂಬರ್ 26 ರಂದು ಅದ್ಧೂರಿ ಚಾಲನೆ ದೊರೆಯಲಿದೆ.