ಮಂಗಳೂರು : ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ…

57
firstsuddi

ಮಂಗಳೂರು : ನಗರದ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ.

ನಗರದ ಪ್ರತಿಷ್ಠಿತ ದೇವಸ್ಥಾನಗಳಾದ ಮಂಗಳಾದೇವಿ ದೇವಸ್ಥಾನ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಸಂಬಂಧ ದೇವಸ್ಥಾನಗಳ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಸಂವಿಧಾನ ವಿರೋಧಿಗಳಿಗೆ, ಗೋ ಕಟುಕರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ಬ್ಯಾನರ್ ದೇವಸ್ಥಾನದ ಮುಂಭಾಗ ಹಾಕಲಾಗಿದೆ. 

ಇನ್ನೂ ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿ, ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ, ತಹಶೀಲ್ದಾರ್ ರೊಂದಿಗೆ ಮಾತನಾಡಿದ್ದೇವೆ. ಬ್ಯಾನರ್ ನ ಯಾರು ಹಾಕಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ. ಆಡಳಿತ ಮಂಡಳಿ ಈ ಬಗ್ಗೆ ದೂರು ನೀಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.