ಮಂಗಳೂರು : ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಕಾರು…

132
firstsuddi

ಮಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿರುವ ಘಟನೆ ನಗರದ ಪಿವಿಎಸ್ ವೃತ್ತದ ಬಳಿ ನಡೆದಿದೆ. ಕೋಡಿಯಾಲ್ ಕಡೆಯಿಂದ ಬರುತ್ತಿದ್ದ ಕಾರು ಪಿವಿಎಸ್ ಸರ್ಕಲ್ ಬಳಿ ಬರುತ್ತಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಕೂಡಲೇ ಕಾರಿನಲ್ಲಿದ್ದ ನಾಲ್ವರು ಕಾರಿನಿಂದ ಇಳಿದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಕಾರು ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದಂತೆ ಸಂಚಾರ ಪೊಲೀಸರು ಸಾರ್ವಜನಿಕರ ಸಹಾಯದಿಂದ ಬೆಂಕಿ ನಂದಿಸಲು ಯತ್ನಿಸಿದ್ದು, ಬಳಿಕ ಅಗ್ನಿಶಾಮ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.