ಮಂಗಳೂರು : ನಗರದ ಪ್ರತಿಷ್ಠಿತ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ.
ಕಳೆದ ರಾತ್ರಿ ಕಾಲೇಜು ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳೊಂದಿಗೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಏಕಾಏಕಿ ಪಬ್ ಗೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಪಾರ್ಟಿ ನಿಲ್ಲಿಸಿ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದಾರೆ. ನಂತರ ಘಟನೆ ಕುರಿತಂತೆ ಮಾಹಿತಿ ದೊರೆತ ಪೊಲೀಸರು, ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಬಜರಂಗದಳ ಕಾರ್ಯಕರ್ತರನ್ನು ಚದುರಿಸಿದ್ದಾರೆ.










