ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಸಂದೇಶ ರವಾನೆ ಆರೋಪ : ಯುವಕ ಸೆರೆ

129
firstsuddi

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಸಂದೇಶ ರವಾನಿಸಿದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಪಾಂಡೇಶ್ವರ ನಿವಾಸಿ ಮೊಯ್ದಿನ್ ಹಮೀದ್ (25) ಬಂಧಿತ ಆರೋಪಿ. ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರ- ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಳ್ಳುವುದು, ರವಾನೆ ಮಾಡುವುದು ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಾದಾತ್ಮಕ ಪೋಸ್ಟ್ ಹಾಕಿದ ಹಲವರ ವಿರುದ್ಧ ನೋಟಿಸ್ ಕಳುಹಿಸಲಾಗಿದೆ. ಸದ್ಯ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ