ಮಂಗಳೂರು : ಸಿಎಎ, ಎನ್​​ಆರ್​​ಸಿ ವಿರೋಧಿಸಿ ಬೃಹತ್ ಸಮಾವೇಶ-ಬಿಗಿ ಪೊಲೀಸ್ ಬಂದೋಬಸ್ತ್…

169
firstsuddi

ಮಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಾಣಿ ವಿರೋಧಿಸಿ ಇಂದು ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಬೃಹತ್ ಸಮಾವೇಶ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಂದೋಬಸ್ತ್ ಗಾಗಿ ಎಲ್ಲಾ ಜಿಲ್ಲೆಗಳಿಂದ ಪೋಲಿಸರನ್ನು ಮಂಗಳೂರಿಗೆ ರವಾನಿಸಲಾಗಿದ್ದು, ಸುಮಾರು 3 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. 8 ಮಂದಿ ಎಸ್ಪಿ, 12 ಮಂದಿ ಎಎಸ್ಪಿ, 40 ಮಂದಿ ಡಿಎಸ್ಪಿ, 9 ಇನ್ಸ್ಪೆಕ್ಟರ್ , 200 ಮಂದಿ ಸಬ್ ಇನ್ಸ್ಪೆಕ್ಟರ್ಳು, 300 ಎಎಸ್ಐಗಳು ಭದ್ರತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮೂರು ಕೇಂದ್ರೀಯ ಅರೆಸೇನಾ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ. ರ್ಯಾಪಿಡ್ ಇಂಟರ್ವೆನ್ಶನ್ ವಾಹನ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮಾವೇಶ ನಡೆಯುವ ಮೈದಾನ ಮತ್ತು ಸುತ್ತಲಿನ ಪ್ರದೇಶದಲ್ಲಿಯೇ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.