ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು 2 ಲಕ್ಷ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ : ಸಿದ್ದರಾಮಯ್ಯ

185
firstsuddi

ಮಂಡ್ಯ : ಕಾಂಗ್ರೆಸ್-ಜೆಡಿಎಸ್ ಜಂಟಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ದೊಡ್ಡ ಹಂತರದಲ್ಲಿ ಗೆದ್ದಿದ್ದೇವೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಯಾರೂ ಮತ ಹಾಕಬೇಡಿ. ಮೋದಿಯವರು ಮೈಸೂರಿನಲ್ಲಿ ಭಾಷಣ ಮಾಡುವಾಗ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿ ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಅಭ್ಯರ್ಥಿಯನ್ನು ಹಾಕದೇ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ. ಆದುದರಿಂದ ಸುಮಲತಾ ಅವರಿಗೆ ಮತ ಹಾಕಿದರೆ ಕೋಮುವಾದಿ ಪಕ್ಷವಾದ ಬಿಜೆಪಿಗೆ ಮತ ಹಾಕಿದಂತೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು 2 ಲಕ್ಷ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ. ಹಾಗಾಗಿ ಪಕ್ಷೇತರ ಅಭ್ಯರ್ಥಿಗೆ ಮತ ಹಾಕದೆ ಮೈತ್ರಿ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ.