ಮಂಡ್ಯ: ಪ್ರೀತಿಸಿದ ಯುವತಿಯ ಜೊತೆ ಮದುವೆಯಾಗುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಭಾಸ್ಕರ್(23) ಆತ್ಮಹತ್ಯೆಗೆ ಶರಣಾದ ಯುವಕ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










