ಮಂಡ್ಯ : ಮನೆಯಲ್ಲಿ ಮಲಗಿದ್ದ ಒಂಟಿ ಮಹಿಳೆಯನ್ನು ಸಜೀವ ದಹನ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮಾರಸಿಂಗನಹಳ್ಳಿ ಗ್ರಾಮದ ಪ್ರೇಮಾ (42) ಮೃತ ಮಹಿಳೆ. ಪ್ರೇಮಾಳ ಗಂಡ ಅನಾರೋಗ್ಯದಿಂದ ಮೃತಪಟ್ಟಿದ್ದರು. ಒಬ್ಬನೇ ಮಗ ಹಾಗೂ ಸೊಸೆ ಬೆಂಗಳೂರಿನಲ್ಲಿ ವಾಸವಿದ್ದಾರೆ. ಹೀಗಾಗಿ ಪ್ರೇಮ ಊರಿನಲ್ಲಿ ಒಂಟಿಯಾಗಿ ವಾಸವಿದ್ದರು. ನಿನ್ನೆ ರಾತ್ರಿ ತಮ್ಮ ಮನೆಯಲ್ಲಿ ಒಂಟಿಯಾಗಿ ಮಲಗಿದ್ದಾಗ ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ.
ಹಾಸಿಗೆಯಲ್ಲಿ ಸಂಪೂರ್ಣ ಸುಟ್ಟು ಹೋಗಿರುವ ಸ್ಥಿತಿಯಲ್ಲಿ ಪ್ರೇಮಾ ಅವರ ಮೃತದೇಹ ಪತ್ತೆಯಾಗಿದೆ. ಆದರೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬೆಸಗರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.










