ಮಂಡ್ಯ ಮೂಲದ ಯುವ ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ…

110
firstsuddi

ಕೊಡಗು: ಮಂಡ್ಯ ಮೂಲದ ಯುವ ಮಹಿಳಾ ಅರಣ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಅರಣ್ಯ ಇಲಾಖೆ ವಸತಿಗೃಹದಲ್ಲಿ ನಡೆದಿದೆ.

ಮಂಡ್ಯ ಮೂಲದ ರಶ್ಮಿ (27) ಮೃತ ಅಧಿಕಾರಿ. ಇವರು ಅರಣ್ಯ ಇಲಾಖೆಯಲ್ಲಿ ಉಪ ಅರಣ್ಯಾಧಿಕಾರಿ(ಡಿಆರ್‍ಎಫ್‍ಒ) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಮಡಿಕೇರಿಯ ಅರಣ್ಯ ಇಲಾಖೆ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ರಶ್ಮಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.