ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್ ಕುಟುಂಬದ ವಿರುದ್ಧ ಎಸ್​ಪಿಗೆ ದೂರು…

87
firstsuddi

ಮಂಡ್ಯ : ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅಭಿಮಾನಿಗಳ ಸಂಘದವರು ಮುಸ್ಕಾನ್ ಮತ್ತು ಕುಟುಂಬದ ವಿರುದ್ಧ ಮಂಡ್ಯ ಎಸ್ ಪಿಗೆ ದೂರು ಕೊಟ್ಟಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಮೂಲಕ ಅವರನ್ನ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ ಸಂದರ್ಭದಲ್ಲಿ ಪಿ.ಇ.ಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಜೈಶ್ರೀರಾಮ್ ಘೋಷಣೆಗೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದಳು. ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು.

ಘಟನೆ ಬಳಿಕ ಮುಸ್ಲಿಂ ಸಂಘಟನೆಗಳು ಹಣ, ಉಡುಗೊರೆ, ಬಹುಮಾನ ನೀಡಿ ಬೆಂಬಲ ನೀಡಿದ್ದವು. ಇದೀಗ ಅಲ್ ಖೈದಾ ಸಂಘಟನೆ ಮುಖ್ಯಸ್ಥನಿಂದ ಮುಸ್ಕಾನ್ ಬಗ್ಗೆ ಹೊಗಳಿಕೆ ಕೇಳಿ ಬಂದಿದೆ. ಈ ಬೆಳವಣಿಗೆ ದೇಶದ ಆಂತರಿಕ ಭದ್ರತೆಗೆ ಅಪಾಯ ಎಂದು ದೂರಿನಲ್ಲಿ ತಿಳಿಸಲಾಗಿದೆ.