ಮಂಗಳೂರು : ಸ್ವಂತ ಮಗನ ಮೇಲೆ ತಂದೆಯೇ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.
ಮೃತರನ್ನು ಜೆಪ್ಪಿನಮೊಗರು ನಿವಾಸಿ ಸ್ವಾಮಿತ್ ಶೆಟ್ಟಿ (25) ಎಂದು ಗುರುತಿಸಲಾಗಿದೆ.
ಸಾಕು ದನಗಳನ್ನು, ಮನೆಯ ಹೊರಗಡೆ ಕಟ್ಟಿ ಹಾಕಿರುವ ವಿಚಾರದಲ್ಲಿ ತಂದೆ-ಮಗನ ನಡುವೆ ಸಂಘರ್ಷ ಏರ್ಪಟ್ಟಿತ್ತು. ಕೋಪಗೊಂಡ ತಂದೆ ವಿಶ್ವನಾಥ ಶೆಟ್ಟಿ, ಮಗ ಸ್ವಾಮಿತ್ ಶೆಟ್ಟಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಗಂಭೀರ ಗಾಯಗೊಂಡ ಸ್ವಾಮೀತ್ ಶೆಟ್ಟಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಆರೋಪಿಯನ್ನು ಈಗಾಗಲೇ ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.










