‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‍ಗೆ ಜಾಮೀನು…

55
firstsuddi

ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಠ, ಎದ್ದೇಳು ಮಂಜುನಾಥ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅವರಿಗೆ 21ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಗುರುಪ್ರಸಾದ್ 2015-16 ರಲ್ಲಿ ಶ್ರೀನಿವಾಸ್ ಬಳಿ 30 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಗುರುಪ್ರಸಾದ್ ಪಡೆದಿದ್ದ ಸಾಲವನ್ನು ಮರು ಪಾವತಿಸಿರಲಿಲ್ಲ. ಗುರುಪ್ರಸಾದ್ ಶ್ರೀನಿವಾಸ್ ಗೆ ನೀಡಿದ್ದ ಮೂರು ಚೆಕ್ ಗಳು ಬೌನ್ಸ್ ಆಗಿದ್ದವು. ಹಾಗಾಗಿ ಶ್ರೀನಿವಾಸ್ ನ್ಯಾಯಾಲಯದ ಮೊರೆ ಹೋಗಿದ್ದರು.

ಈ ಬಗ್ಗೆ ಕೋರ್ಟ್ ಗುರುಪ್ರಸಾದ್ ಗೆ ವಾರಂಟ್ ಜಾರಿ ಮಾಡಿತ್ತು. ಆದರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದರಿಂದಾಗಿ ಕೋರ್ಟ್ ನಿರ್ದೇಶಕರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿತ್ತು. ಜೊತೆಗೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಗಿರಿನಗರ ಪೊಲೀಸರಿಗೆ ಸೂಚಿಸಿತ್ತು. ಹೀಗಾಗಿ ಗಿರಿನಗರ ಪೊಲೀಸರು ಗುರು ಪ್ರಸಾದ್ ಅವರನ್ನು ಬಂಧಿಸಿದ್ದರು.