ಮಡಿಕೇರಿ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ…

35
firstsuddi

ಮಡಿಕೇರಿ: ದಕ್ಷಿಣ ಕೊಡಗಿನ ಕಾಫಿ ಎಸ್ಟೇಟ್ ನಲ್ಲಿ ನಿನ್ನೆ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಪೊಳಲಿಬೆಟ್ಟ ಸಮೀಪದ ಅಬ್ಬೂರಿನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಅಸ್ಸಾಂ ಮೂಲದ ಎಸ್ಟೇಟ್ ಕಾರ್ಮಿಕರಾಗಿದ್ದ ಅಜಬಾನು(37) ಎಂದು ಗುರುತಿಸಲಾಗಿದೆ. ಅಜಬಾನು ಖಾಸಗಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.

ಸ್ಥಳದಲ್ಲಿದ್ದ ಇತರ ಎಸ್ಟೇಟ್ ಕಾರ್ಮಿಕರು ಕೂಡಲೇ ಅಜಬಾನುನನ್ನು ಪೊಲಿಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಾಡಾನೆ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ನಂತರ ವಿರಾಜಪೇಟೆ ವಿಭಾಗದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.