ಮತದಾನಕ್ಕೆ ಬಂದಿದ್ದ ವೃದ್ಧೆ ಸಾವು.. ವೋಟ್ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಸಾವು…

68
firstsuddi

ಹಾಸನ/ಬೆಳಗಾವಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ನಡುವೆ ಮತ ಚಲಾಯಿಸಲು ಮತಗಟ್ಟೆಗೆ ಬಂದಿದ್ದ ವ್ಯಕ್ತಿ ಹಾಗೂ ವೃದ್ಧೆ ಎರಡು ಪ್ರತ್ಯೇಕ ಮತದಾನ ಕೇಂದ್ರದಲ್ಲಿ ಸಾವನ್ನಪ್ಪಿರುವ ಘಟನೆ ಹಾಸನ ಮತ್ತು ಬೆಳಗಾವಿಯಲ್ಲಿ ನಡೆದಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಜಯಣ್ಣ(49) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತದಾನ ಮಾಡಿ ಹೊರಬಂದ ಅವರು ಮತದಾನ ಕೇಂದ್ರದ ಆವರಣದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನು ಮತ್ತೊಂದೆಡೆ ಬೆಳಗಾವಿಯಲ್ಲಿ ಮತಚಲಾಯಿಸಲು ಬಂದಿದ್ದ ವೃದ್ಧೆ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿಯ ಜಿಲ್ಲೆ ಸವದತ್ತಿ-ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯ ಯರಝರ್ವಿ ಗ್ರಾಮದಲ್ಲಿ ಪಾರವ್ವ ಈಶ್ವರ್ ಸಿದ್ನಾಳ (68) ಎಂಬ ವೃದ್ಧೆ ಮತ ಚಲಾಯಿಸಲೆಂದು ಮತಗಟ್ಟೆಗೆ ಬಂದಿದ್ದರು. ಮತದಾನಕ್ಕೂ ಮುನ್ನವೇ ಮತಗಟ್ಟೆಯ ಆವರಣದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.