ಮತದಾನ ಮಾಡಿದ ಸ್ಯಾಂಡಲ್‍ವುಡ್ ನಟ-ನಟಿಯರು…

76
firstsuddi

ರಾಜ್ಯಾದ್ಯಂತ ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಸ್ಯಾಂಡಲ್ ವುಡ್ ನ ಬಹುತೇಕ ನಟ -ನಟಿಯರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ.

ಕನ್ನಡ ಚಿತ್ರರಂಗದ ತಾರೆಗಳಾದ ಅಮೂಲ್ಯ, ಯಶ್, ಉಪೇಂದ್ರ, ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್, ರಚಿತಾ ರಾಮ್, ರವಿಚಂದ್ರನ್, ಶಿವರಾಜ್ ಕುಮಾರ್ ಸೇರಿದಂತೆ ಸಾಕಷ್ಟು ನಟ-ನಟಿಯರು ಬೆಳಗ್ಗೆಯೇ ಮತದಾನ ಮಾಡಿದ್ದಾರೆ. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶಿವರಾಜ್ ಕುಮಾರ್ ಬ್ಯಾಟರಾಯನಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಜಗ್ಗೇಶ್ ಮಲ್ಲೇಶ್ವರಂ, ಉಪೇಂದ್ರ ಕತ್ರಿಗುಪ್ಪೆ, ನಟ ಯಶ್ ಕತ್ರಿಗುಪ್ಪೆ, ಸುದೀಪ್ ಪುಟ್ಟೇನಹಳ್ಳಿ, ರಾಘವೇಂದ್ರ ರಾಜ್ ಕುಮಾರ್ ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ಅಮೂಲ್ಯ ಆರ್ ಆರ್ ನಗರ, ನೆನಪಿರಲಿ ಪ್ರೇಮ್ ಆರ್ ಆರ್ ನಗರ, ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ಅನಂತ್ ನಾಗ್ ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ.

ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ), ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ, ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ ಕತ್ರಿಗುಪ್ಪೆ, ಚಂದನ್ ಶೆಟ್ಟಿ ನಾಗರಬಾವಿ, ಕಾರುಣ್ಯ ರಾಮ್ ಆರ್ ಆರ್ ನಗರ, ಅವಿನಾಶ್ ಆರ್ ಆರ್ ನಗರ, ಜಗ್ಗೇಶ್ ಮಲ್ಲೇಶ್ವರಂ, ಶರಣ್ ಹೊಸಕೆರೆಹಳ್ಳಿ, ದುನಿಯಾ ವಿಜಯ್ ಕತ್ತಿಗುಪ್ಪೆ, ಸಾಧು ಕೋಕಿಲ ನಾಗರಬಾವಿ, ಅರ್ಜುನ್ ಜನ್ಯ ಹೆಬ್ಬಾಳ, ಶ್ರೀಮುರುಳಿ ವಸಂತನಗರ, ವಿಜಯ್ ರಾಘವೇಂದ್ರ ಯಲಹಂಕ, ರಮೇಶ್ ಅರವಿಂದ್ ಪದ್ಮನಾಭ ನಗರ, ಮಾಲಾಶ್ರೀ ಶಿವಾಜಿನಗರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರ್ ಆರ್ ನಗರ, ಶ್ರುತಿ ಹೊಸಕೆರೆ ಹಳ್ಳಿ, ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಜೆ ಪಿ ನಗರ, ರಿಷಬ್ ಶೆಟ್ಟಿ ಕೆರಾಡಿ(ಕುಂದಾಪುರ), ರಕ್ಷಿತ್ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರಿನಲ್ಲಿ ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಿದ್ದಾರೆ.