ಮತದಾನ ಮಾಡಿ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವಯೋವೃದ್ಧೆ.

15
firstsuddi

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಸಾವಿನ ಮುನ್ನ ಹಕ್ಕು ಚಲಾಯಿಸಿದ ಹಿರಿಯ ನಾಗರೀಕರ ಈ ಕರ್ತವ್ಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ.

ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರೀಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಹೀಗಾಗಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧಾ ಅವರು ಮನೆಯಲ್ಲೆ ಮತದಾನ ಮಾಡಿದರು.

ಮತದಾನದ ದಿನ ಪಿ.ಯಶೋಧಾ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿ ಆಸ್ಪತ್ರೆ ತೆರಳಲು ಪಿ.ಯಶೋಧಾ ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕ ಪಿ.ಯಶೋಧಾ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪಿ.ಯಶೋಧಾ ಅವರು ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.