ಮತದಾರರು ‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ನನ್ನ ಮನದಾಳದ ಅಭಿನಂದನೆಗಳು- ಹೆಚ್.ಡಿ. ಕುಮಾರಸ್ವಾಮಿ

315
firstsuddi

ಬೆಂಗಳೂರು : ರಾಜ್ಯದಲ್ಲಿ 15 ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಬಿಜೆಪಿ 15 ಕ್ಷೇತ್ರದ ಪೈಕಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಅಭಿನಂದನೆಯನ್ನು ತಿಳಿಸಿದ್ದಾರೆ. “ಇದೊಂದು “ಅಸಹ್ಯ” ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು”