ಮತ್ತೆ ಕಾಡಿದ ಕೊರೊನಾ – ಅಮರಾವತಿಯಲ್ಲಿ ಇಂದಿನಿಂದ ಒಂದು ವಾರ ಸಂಪೂರ್ಣ ಲಾಕ್‍ಡೌನ್!

118
First Suddi

ಮುಂಬೈ : ಮಹಾರಾಷ್ಟ್ರದಲ್ಲಿ ಮಾರಕ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನಲೆ ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ. ಇಂದು ಸಂಜೆಯಿಂದಲೇ ಲಾಕ್ಡೌನ್ ನಿಯಮ ಜಾರಿಗೆ ಬರಲಿದ್ದು, ಮುಂದಿನ ಏಳು ದಿನಗಳ ಕಾಲ ಲಾಕ್‍ಡೌನ್ ಜಾರಿಯಲ್ಲಿರಲಿದೆ. ಈ ವೇಳೆ ಕೇವಲ ಅಗತ್ಯ ಸೇವೆಗಳು ಮಾತ್ರ ಸಿಗಲಿವೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವೆ ಯಶೋಮತಿ ಠಾಕೂರ್ ಅವರು ಅಮರಾವತಿಯ ಅಚಲ್ ನಗರವನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಕೇವಲ ಅಗತ್ಯ ಸೇವೆಗಳ ಲಭ್ಯವಿರುತ್ತವೆ ಹೊರತು ಬೇರಾವುದೇ ಕೆಲಸಕ್ಕೆ ಹೋಗಲು ಅನುಮತಿ ಇಲ್ಲ ಎಂದು ತಿಳಿಸಿದ್ದಾರೆ. ಅಮರಾವತಿಯ ನಾಲ್ಕು ಜಿಲ್ಲೆಗಳಾದ ಅಕೋಲ, ವಾಷಿಂ, ಬುಲ್ಧಾನಾ, ಮತ್ತು ಯಾವತ್ಮಲ್‍ನಲ್ಲಿ ಕೆಲವು ನಿರ್ಬಂಧಗಳನ್ನು ಹೇರುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.