ಮತ್ತೆ ಕಿರಿಕ್ ಶುರು ಮಾಡಿದ ಎಂಇಎಸ್.

62
firstsuddi

ಬೆಳಗಾವಿ : ಎಂಇಎಸ್ ಮುಖಂಡ ಶುಭಂ ಶಳಕೆ ಎಂಬಾತ ಭಾಷಾ ಸಾಮರಸ್ಯ ಕದಡುವ ಹುನ್ನಾರ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ವಿಡಿಯೋ ಪೋಸ್ಟ್ ಮಾಡಿದ್ದಾನೆ.

ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ನಕ್ಷೆ ಪೋಸ್ಟ್ ಮಾಡಿರುವ ಆತ, ಸಂಯುಕ್ತ ಮಹಾರಾಷ್ಟ್ರ ನಕ್ಷೆಯಲ್ಲಿ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ, ಬಾಲ್ಕಿ ಸೇರಿಸಿದ್ದಾನೆ.

ಮಹಾರಾಷ್ಟ್ರ ವಾದಿಗಳೇ ನಮಗೆ ಮನಃಪೂರ್ವಕವಾಗಿ ಮಹಾರಾಷ್ಟ್ರ ಡೇಗೆ ಶುಭಕೋರಲು ಆಗುತ್ತಿಲ್ಲ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತದ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ಶುಭಂ ಶಳಕೆ ಪೋಸ್ಟ್ ಮಾಡಿದ್ದಾನೆ.