ಮತ್ತೊಂದು ಮದುವೆಯಾಗಲು ಮುಂದಾದ ತಂದೆಯನ್ನ ಕೊಂದ ಮಗ!

91
firstsuddi

ಮುಂಬೈ : ಮತ್ತೊಂದು ಮದುವೆಯಾಗಲು ಮುಂದಾದ ತಂದೆಯನ್ನು ಮಗ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ರಾಜಗುರುನಗರದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವೈಶಂಪಾಯನಲಿ ಪ್ರದೇಶದ ಹೌಸಿಂಗ್ ಸೊಸೈಟಿಯ ನಿವಾಸಿ ಶಂಕರ್ ರಾಂಭೌ ಬೋರ್ಹಾಡೆ (80) ಮೃತ ವ್ಯಕ್ತಿ. ಶೇಖರ್ ಬೋರ್ಹಾಡೆ (47) ಆರೋಪಿ. ಶಂಕರ್ ಬೋರ್ಹಾಡೆ ಅವರು ಮ್ಯಾಟ್ರಿಮೋನಿಯಲ್ಲಿ ಮತ್ತೊಂದು ಮದುವೆ ಮಾಡಿಕೊಳ್ಳುವ ಸಲುವಾಗಿ ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದರು. ಈ ವಿಷಯ ತಿಳಿದು ಕೋಪಗೊಂಡಿದ್ದ ಶೇಖರ್ ಚಾಕುವಿನಿಂದ ತನ್ನ ತಂದೆಯ ಕತ್ತನ್ನು ಕೊಯ್ದಿದ್ದಾನೆ. ನಂತರ ಸಾವು ಬದುಕಿನ ನಡುವೆ ನರಳುತ್ತಿದ್ದ ತಂದೆಯನ್ನು ನೋಡಿದ ಶೇಖರ್, ತಲೆಗೆ ರುಬ್ಬುವ ಕಲ್ಲಿನಿಂದ ಹೊಡೆದು ಬಳಿಕ ರಾಜಗುರು ಪೊಲೀಸ್ ಠಾಣೆಗೆ ತೆರಳಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಖರ್ ನನ್ನು ಬಂಧಿಸಲಾಗಿದ್ದು, ಇನ್ಸ್ಪೆಕ್ಟರ್ ಸತೀಶ್ ಕುಮಾರ್ ಗೌರವ್ ನೇತೃತ್ವದಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.