ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ ಅತೃಪ್ತ ಶಾಸಕರು…

152
firstsuddi

ಬೆಂಗಳೂರು : ಅತೃಪ್ತ ಶಾಸಕರ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಅವರನ್ನು ಖುದ್ದಾಗಿ ಭೇಟಿ ನೀಡಿ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದರೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸುವಂತೆ ಆದೇಶ ಹೊರಡಿಸಿತ್ತು. ಇದನ್ನು ಅರಿತ ಅತೃಪ್ತರು ಮುಂಬೈಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಬಂದು ಜೀರೋ ಟ್ರಾಫಿಕ್‍ನಲ್ಲಿ ವಿಧಾನಸೌಧವನ್ನು 6 ಗಂಟೆ 3 ನಿಮಿಷಕ್ಕೆ ತಲುಪಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮತ್ತೊಮ್ಮೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಕುರಿತು ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಸಂಜೆ 7ಗಂಟೆಗೆ ಸುದ್ದಿಗೋಷ್ಟಿಯನ್ನು ಕರೆದಿದ್ದಾರೆ.