ಮದುವೆಯಾಗದೇ ಗರ್ಭಿಣಿಯಾಗಿದ್ದ ಮಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬಸ್ಥರು…

50
firstsuddi

ಲಕ್ನೋ: ಅವಿವಾಹಿತ ಯುವತಿಯೊಬ್ಬಳು ಗರ್ಭಿಣಿ ಎನ್ನುವ ವಿಚಾರ ತಿಳಿದು ಆಕೆಯ ಕುಟುಂಬಸ್ಥರು ಬೆಂಕಿ ಹಚ್ಚಿದ ಪ್ರಕರಣ ಉತ್ತರ ಪ್ರದೇಶದ ಹಾಪುರ್‌ನಲ್ಲಿ ನಡೆದಿದೆ.

ಯುವತಿ ಅವಿವಾಹಿತಳಾಗಿದ್ದು ಆಕೆ ಅದೇ ಊರಿನ ಯುವಕನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಳು. ಈ ವಿಚಾರವಾಗಿ ಯುವತಿಯ ತಾಯಿ ಹಾಗೂ ಸಹೋದರ ಯುವಕನೊಂದಿಗೆ ಗಲಾಟೆಯನ್ನು ಮಾಡಿದ್ದರು. ಬಳಿಕ ಯುವತಿ ಗರ್ಭಿಣಿ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಆಕೆಯನ್ನು ಸಮೀಪದ ಅರಣ್ಯಕ್ಕೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬಳಿಕ ಅರಣ್ಯದಲ್ಲಿದ್ದ ಕೆಲವು ರೈತರು ಮಹಿಳೆಯನ್ನು ಗಮನಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಗ ಅಲ್ಲಿನ ವೈದ್ಯರು ಆಕೆಯನ್ನು ಮೀರತ್‌ನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ಮತ್ತು ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ವಿಚಾರವಾಗಿ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.