ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಯುವಕ – ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನೊಂದ ಯುವತಿ.

60
firstsuddi

ಬೆಳಗಾವಿ : ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರವೆಸಗಿ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದ್ದು, ಇದೀಗ ನೊಂದ ಯುವತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಯುವತಿ ವಸತಿ ನಿಲಯದಲ್ಲಿ ಸೂಪರಿಂಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೇ ವಸತಿ ನಿಲಯ ಬಾಡಿಗೆ ನೀಡಿದ್ದ ಕಟ್ಟಡ ಮಾಲೀಕನ ಪುತ್ರ ಆದರ್ಶ ಮಾಲದಿನ್ನಿ 2016ರ ಡಿಸೆಂಬರ್ 5ರಂದು ಅತ್ಯಾಚಾರವೆಸಗಿದ್ದನಂತೆ, ಅಲ್ಲದೇ ಫೋಟೋ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಇದಾದ ಬಳಿಕ ಯುವತಿ ಪೊಲೀಸರಿಗೆ ದೂರು ನೀಡಲು ಮುಂದಾಗುತ್ತಿದ್ದಂತೆ ಮದುವೆ ಆಗುವುದಾಗಿ ಯುವತಿಯನ್ನ ನಂಬಿಸಿದ್ದಾನೆ. ಈ ಈ ವಿಷಯವನ್ನು ಆದರ್ಶ್ ತಂದೆ, ತಾಯಿಗೆ ಹೇಳಿದರೂ ಹಣದ ಆಮಿಷ ತೋರಿಸಿ ನಂತರ ಜೀವ ಬೆದರಿಕೆಯೊಡ್ಡಿದ್ದಾರೆ. ಇದೀಗ ನನ್ನನ್ನು ನಂಬಿಸಿ ಅತ್ಯಾಚಾರ ಎಸಗಿ ಮೋಸ ಮಾಡಿರುವ ಯುವಕ ಇಂದು ಬೇರೆ ಯುವತಿ ಜೊತೆಗೆ ಮದುವೆಯಾಗುತ್ತಿದ್ದು ನನಗೆ ನ್ಯಾಯ ಕೊಡಿಸಿ ಎಂದು ಯುವತಿ ಇದೀಗ ಬೆಳಗಾವಿ ಎಸ್.ಪಿ ಮೊರೆ ಹೋಗಿದ್ದಾಳೆ.