ಮದುವೆ ಮಾಡಿಲ್ಲ ಎಂದು ಹೆತ್ತ ತಾಯಿಯನ್ನೇ ಬರ್ಬರವಾಗಿ ಕೊಲೆಗೈದ ಮಗ.

50
firstsuddi

ಕಲಬುರಗಿ: ಮದುವೆ ಮಾಡಿಲ್ಲ ಎಂದು ವ್ಯಕ್ತಿಯೊಬ್ಬ ತನ್ನ ಹೆತ್ತ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೋಚಾವರಂನಲ್ಲಿ ನಡೆದಿದೆ.

ಶೋಭಾ (45) ಕೊಲೆಯಾದ ತಾಯಿ. ಮಗ ಅನಿಲ್ ಮನೆಗೆ ಕುಡಿದು ಬಂದಿದ್ದು, ಕುಡಿದ ನಶೆಯಲ್ಲಿ ಮದುವೆ ಬಗ್ಗೆ ಮಾತನಾಡಿ ತಾಯಿಯೊಂದಿಗೆ ಜಗಳವಾಡಿದ್ದಾನೆ. ಇನ್ನಷ್ಟು ಕೋಪಗೊಂಡ ಅನಿಲ್ ತನಗೆ ಏಕೆ ಮದುವೆ ಮಾಡಿಸಿಲ್ಲ ಎಂದು ತಾಯಿಗೆ ಪ್ರಶ್ನೆ ಮಾಡಿದ್ದಾನೆ. ಬಳಿಕ ಕುಡಿದ ನಶೆಯಲ್ಲಿ ಅಲ್ಲೇ ಇದ್ದ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಆರೋಪಿ ಅನಿಲ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕೊಂಚಾವರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.