ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಕಮರಿಗೆ ಬಿದ್ದ ವಾಹನ – 14 ಮಂದಿ ದಾರುಣ ಸಾವು…

76
firstsuddi

ಡೆಹ್ರಾಡೂನ್ : ಮದುವೆ ಮುಗಿಸಿ ವಾಪಾಸ್ ಆಗುತ್ತಿದ್ದ ವಾಹನವೊಂದು ಕಮರಿಗೆ ಬಿದ್ದು 14 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರಾಖಂಡದಲ್ಲಿ ಇಂದು ಮುಂಜಾನೆ ನಡೆದಿದೆ.

ಚಂಪಾವತ್ ಜಿಲ್ಲೆಯಲ್ಲಿ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಜನರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದರು. ಈ ವೇಳೆ ವಾಹನ ಕಮರಿಗೆ ಬಿದ್ದಿದೆ. ಪರಿಣಾಮವಾಗಿ 14 ಮಂದಿ ಸಾವಿಗೀಡಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ಪಡೆಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.