ಬೆಂಗಳೂರು : ಸರ್ಕಾರದಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತಿದ್ದಂತೆ ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕುಡಿದ ಅಮಲಿನಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನೆಲಮಂಗಲ ಸಮೀಪದ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ದಿವ್ಯ(24) ಕೊಲೆಯಾದ ಪತ್ನಿ ಎಂದು ಗುರುತಿಸಲಾಗಿದ್ದು, ತೀರ್ಥಪ್ರಸಾದ್ ಕೊಲೆಗೈದ ಪತಿ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ತೀರ್ಥಪ್ರಸಾದ್ ನಿನ್ನೆ ರಾತ್ರಿ ಮದ್ಯ ಸೇವಿಸಿ ಮನೆಗೆ ತೆರಳಿ ತನ್ನ ಪತ್ನಿಯೊಂದಿಗೆ ಜಗಳ ಆರಂಭಿಸಿದ್ದು, ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಪತ್ನಿಯ ಕತ್ತನ್ನು ಸೀಳಿ ಪರಾರಿಯಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










