ಮದ್ಯ ಮಾರಾಟ ಸಂಪೂರ್ಣ ನಿಷೇಧ : ಕೆ.ಗೋಪಾಲಯ್ಯ.

67
firstsuddi

ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ವೀಕೆಂಡ್ ಕಫ್ರ್ಯೂ ಘೋಷಿಸಿದೆ. ಈ ಹಿನ್ನಲೆ ರಾಜ್ಯಾದ್ಯಂತ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಸಂಪೂರ್ಣವಾಗಿ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.