ನವದೆಹಲಿ : ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಕನಕರಾಜು ಮತ್ತು ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ. ಶಶಿಧರ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಡಿ.ವೈ. ಚಂದ್ರಚೂಡ್ ನೇತೃತ್ವದ ದ್ವಿಸದಸ್ಯ ಪೀಠ, ಅರ್ಜಿ ಸಲ್ಲಿಸಿದ ನಿಮಗೆ ಏನು ಸಮಸ್ಯೆಯಾಗಿದೆ. ಲೋಕಾಯುಕ್ತಕ್ಕೆ ಅಧಿಕಾರ ವರ್ಗಾವಣೆಯಾಗುತ್ತಿರುವ ಹಿನ್ನಲೆಯಲ್ಲಿ ನಾವು ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ ಎಂದು ಹೇಳಿ ಎಲ್ಲ ಅರ್ಜಿಗಳನ್ನು ವಜಾ ಮಾಡಿತು.
ಭ್ರಷ್ಟ ರಾಜಕಾರಣಿಗಳು, ಸಚಿವರು ಮತ್ತು ಅಧಿಕಾರಿಗಳನ್ನು ಲೋಕಾಯುಕ್ತರ ಕಾವಲು ಕಣ್ಣುಗಳಿಂದ ರಕ್ಷಿಸುವುದಕ್ಕಾಗಿಯೇ ರಾಜ್ಯ ಸರ್ಕಾರವು ಎಸಿಬಿಯನ್ನು ಸ್ಥಾಪಿಸಿದೆ ಎಂದು ಚಾಟಿ ಬೀಸಿದ್ದ ಹೈಕೋರ್ಟ್ ಆಗಸ್ಟ್ 11 ರಂದು ಎಸಿಬಿ ರಚನೆಯನ್ನು ರದ್ದುಪಡಿಸಿ ಆದೇಶ ನೀಡಿತ್ತು.










