ಮನೀಶ್ ಸಿಸೋಡಿಯಾ ಇಡಿ ಕಸ್ಟಡಿ ಮತ್ತೆ 5 ದಿನ ವಿಸ್ತರಣೆ…

44
firstsuddi

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಐದು ದಿನಗಳವರೆಗೆ ವಿಸ್ತರಿಸಿದೆ.

ಸಿಸೋಡಿಯಾ ಅವರ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಮನೀಶ್ ಸಿಸೋಡಿಯಾ ಅವರನ್ನು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಸಿಸೋಡಿಯಾ ಅವರ ಕಸ್ಟಡಿಯನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಇಡಿ ಬೇಡಿಕೆಯ ಮೇರೆಗೆ ನ್ಯಾಯಾಲಯ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ಇನ್ನೂ 5 ದಿನಗಳವರೆಗೆ ವಿಸ್ತರಿಸಿದೆ. ಅಂತೆಯೇ ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 22 ರಂದು ನಡೆಯಲಿದೆ.

ಮನೀಶ್ ಸಿಸೋಡಿಯಾ ಅವರ ಕುಟುಂಬದ ವೆಚ್ಚ ಮತ್ತು ಅವರ ಪತ್ನಿಯ ವೈದ್ಯಕೀಯ ವೆಚ್ಚ 40,000 ಮತ್ತು 45,000 ರೂ.ಗಳ ಚೆಕ್‌ಗಳಿಗೆ ಸಹಿ ಹಾಕಲು ನ್ಯಾಯಾಲಯವು ಅನುಮತಿ ನೀಡಿದೆ.