ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ರೋಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 17 ರವರೆಗೆ ವಿಸ್ತರಿಸಿದೆ.
ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಎಎಪಿ ನಾಯಕನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಏಪ್ರಿಲ್ 17ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿದ್ದು, ತನಿಖೆಯು ಕೊನೆಯ ಹಂತದಲ್ಲಿದೆ ಎಂದು ಹೇಳಿದೆ.
ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಸುಮಾರು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಫೆಬ್ರವರಿ 26 ರಂದು ಸಿಬಿಐ ಬಂಧಿಸಿತ್ತು.










