ಗುಡಿಸಲಿಗೆ ಹೊತ್ತಿಕೊಂಡ ಬೆಂಕಿ – ಒಂದೇ ಕುಟುಂಬದ ಐವರು ದಾರುಣ ಸಾವು…

42
firstsuddi

ಲಕ್ನೋ : ಗುಡಿಸಲಿಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಐವರು ಸಜೀವದಹನವಾಗಿರುವ ಘಟನೆ ಉತ್ತರ ಪ್ರದೇಶದ ಮೌ ಜಿಲ್ಲೆಯ ಶಹಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಒಲೆಯಲ್ಲಿ ಹಚ್ಚಲಾಗಿದ್ದ ಬೆಂಕಿಯ ಕಿಡಿ ಗುಡಿಸಲಿಗೆ ತಗುಲಿ ಇಡೀ ಗುಡಿಸಲು ಸುಟ್ಟು ಭಸ್ಮವಾಗಿದೆ. ಇದರಿಂದಾಗಿ ಗುಡಿಸಲಿನೊಳಗಿದ್ದ ಮಹಿಳೆ, ಪುರುಷ ಹಾಗೂ ಮೂವರು ಮಕ್ಕಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹೊರಬರಲಾಗದೇ ಸಾವನ್ನಪ್ಪಿದ್ದಾರೆ.

ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉಪ ಪೊಲೀಸ್ ಮಹಾನಿರೀಕ್ಷಕ ಅಖಿಲೇಶ್ ಕುಮಾರ್, ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಪಾಂಡೆ ಸ್ಥಳಕ್ಕಾಗಮಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಆರಂಭಿಸಲಾಗಿದೆ.

ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರವಾಗಿ 4 ಲಕ್ಷ ರೂಪಾಯಿ ನೆರವು ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ.