ಬೆಂಗಳೂರು : ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಯಲಹಂಕ ತಾಲ್ಲೂಕಿನ ಕೋಡಗಲಹಟ್ಟಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ಸ್ಪೋಟ ಸಂಬವಿಸಿದ್ದು, ಸ್ಪೋಟದ ತೀವ್ರತೆಗೆ ಮನೆ ಧ್ವಂಸವಾಗಿದ್ದು, ಅಕ್ಕ ಪಕ್ಕದ ಜನರು ಕಂಗಾಲಾಗಿದ್ದಾರೆ. ಘಟನೆಯಲ್ಲಿ ರಮೇಶ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಯಲಹಂಕದ ಶುಶ್ರುಷಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಚಿಕ್ಕಚಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










